Information about yuddha in Kannada and its advantage and disadvantage in Kannada language
Answers
Answer:
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ಧವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ.[೮] ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.[೯][೧೦][೧೧][೧೨] ಪಾಕಿಸ್ತಾನದ ಪಡೆಗಳು ಮತ್ತು ಉಗ್ರಗಾಮಿಗಳು LoCಯಲ್ಲಿ ಆಕ್ರಮಿಸಿಕೊಂಡ ಭಾರತದ ಬಹುತೇಕ ನೆಲೆಗಳನ್ನು ಬಳಿಕ ಭಾರತದ ಸೇನೆಯು ಭಾರತೀಯ ವಾಯು ಪಡೆಯ ಬೆಂಬಲದೊಂದಿಗೆ ಮರುವಶಕ್ಕೆ ತೆಗೆದುಕೊಂಡಿತು. ಅಂತಾರಾಷ್ಟ್ರೀಯವಾಗಿ ರಾಜತಾಂತ್ರಿಕ ವಿರೋಧ ವ್ಯಕ್ತವಾಗಿದ್ದರಿಂದಾಗಿ, ಪಾಕಿಸ್ತಾನದ ಪಡೆಗಳು LOCಯ ಭಾರತದ ನೆಲೆಗಳಿಂದ ಬಲವಂತವಾಗಿ ಹಿಂದಕ್ಕೆ ಸರಿಯಬೇಕಾಯಿತು.