jaharlal nehru all information in kannada
Answers
Explanation:
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ . ಕಾಶ್ಮೀರಿ ಪಂಡಿತ್ ಸಮುದಾಯದೊಂದಿಗಿನ ಅವರ ಮೂಲ ವಂಶದಿಂದಾಗಿ ಅವರು ಪಂಡಿತ್ ನೆಹರೂ ಎಂದು ಕರೆಯಲ್ಪಡುತ್ತಾರೆ, ಭಾರತೀಯ ಮಕ್ಕಳಲ್ಲಿ ಅವರು ಚಾಚಾ ನೆಹರು ("ಅಂಕಲ್ ನೆಹರು") ಎಂದು ಪ್ರಸಿದ್ಧರಾಗಿದ್ದರು. (ಇಂಗ್ಲಿಷ್ ವಿಬಾಗದ ಅನುವಾದ)[೧] [೨]