India Languages, asked by dsouzafiona14, 2 months ago

Kannada essay on ಪರಿಸರ ಸಂರಕ್ಷಾ ನೆಯಲ್ಲಿ ನನ್ನ ಪಾತ್ರ​

Answers

Answered by Anonymous
4

ಪುನರ್ ಬಳಕೆಯಂತ ವಸ್ತುಗಳನ್ನು ಸುಮ್ಮನೆ ಬಿಸಾಡಬೇಡಿ, ಮರುಬಳಕೆ ಮಾಡಿ. ನಿಮಗೆ ಬೇಡದಿದ್ದರೆ ಇತರರಿಗಾದರೂ ದಾನ ಮಾಡಿ. ತಿದಿನದ ಜೀವನದಲ್ಲಿ ಅಥವಾ ಸಮಾರಂಭಗಳ ಸಂದರ್ಭದಲ್ಲಿ ಸುಲಭದಲ್ಲಿ ಮಣ್ಣಾಗಿ ಹೋಗುವ ಪರಿಸರ ಸ್ನೇಹೀ ಉತ್ಪನ್ನಗಳನ್ನು ಬಳಸುವುದು. ಉದಾ: ಪ್ಲಾಸ್ಟಿಕ್ ಚೀಲದ ಬದಲು ಕಾಗದ ಅಥವಾ ಬಟ್ಟೆಯ ಚೀಲ, ಪ್ಲಾಸ್ಟರ್ ಆಫ್ ಪ್ಯಾರಿಸ್ ಬದಲು ಮಣ್ಣಿನ ಗಣೇಶ, ಪ್ಲಾಸ್ಟಿಕ್ ಗೋಣಿಗಳ ಬದಲು ಸೆಣಬಿನ ನಾರಿನ ಗೋಣಿ. ಎಸೆಯುವ ಸಂಸ್ಕೃತಿ’ಯ ಬದಲು ’ರಿಪೇರಿ ಸಂಸ್ಕೃತಿ’ಯನ್ನು ಅಳವಡಿಸಲು ಸಾಧ್ಯವೋ ಎಂಬುದನ್ನು ನೋಡಿ. ನೆಯಲ್ಲಿಯೇ ಜೈವಿಕ, ಹಸಿ ತ್ಯಾಜ್ಯಗಳ ಸಂಸ್ಕರಣೆ ಮಾಡಿ (ಉದಾ: ಅಡುಗೆಮನೆಯ ಆಹಾರ ತ್ಯಾಜ್ಯ, ಉದ್ಯಾನವನದ ಹಸಿರು ತ್ಯಾಜ್ಯ). ಇದರಿಂದ ನೀವು ಮನೆಯಲ್ಲಿಯೇ ಪರ್ಯಾಯ ಇಂಧನ ಅಥವಾ ಗೊಬ್ಬರ ತಯಾರಿಸಬಹುದು, ಬೀದಿಯಲ್ಲಿರುವ ದನಗಳು, ನಾಯಿಗಳು ಪ್ಲಾಸ್ಟಿಕ್ ತಿನ್ನುವುದನ್ನೂ ತಪ್ಪಿಸಬಹುದು. ಇದನ್ನು ಅಪಾರ್ಟ್‍ಮೆಂಟಿನಲ್ಲಿರುವವರೂ ಮಾಡಬಹುದು.ಅಪಾಯಕಾರಿ ತ್ಯಾಜ್ಯಗಳನ್ನು ಮಕ್ಕಳ ಕೈಗೆ ಸಿಗದಂತೆ ಸಂಗ್ರಹಿಸಿ ಜಾಗ್ರತೆಯಾಗಿ ವಿಲೇವಾರಿ ಮಾಡಿ. ಉದಾ: ಟ್ಯೂಬ್‍ಲೈಟುಗಳು, ಸಿ.ಎಫ್.ಎಲ್. ಬಲ್ಬುಗಳು, ಇಲೆಕ್ಟ್ರಾನಿಕ್ ಉಪಕರಣಗಳು ಅಥವಾ ಬಿಡಿಭಾಗಗಳು.ವಿಂಗಡನೆ ಮಾಡಿ ವಿಲೇವಾರಿ ಮಾಡುವ ಪ್ರಬುದ್ಧ ವ್ಯವಸ್ಥೆ ಇಲ್ಲದಿದ್ದಲ್ಲಿ ಅದಕ್ಕೋಸ್ಕರ ಒತ್ತಾಯಿಸಿ, ವಿಂಗಡನೆ ಮಾಡುವುದು ನಿಮ್ಮ ಜವಾಬ್ದಾರಿ, ಆದರೆ ಅದರ ಮುಂದಿನ ವ್ಯವಸ್ಥೆಯನ್ನು ಕೇಳುವುದು ನಿಮ್ಮ ಹಕ್ಕು.

  • ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನೇ ಹೆಚ್ಚಾಗಿ ಬಳಸಲು ಪ್ರಯತ್ನ ಮಾಡಿ. ಇದರಿಂದ ಪರಿಸರವೂ ಉಳಿಯುತ್ತದೆ, ದೇಶದ ಪೆಟ್ರೋಲಿಯಂ ಆಮದಿನ ಹೊರೆಯೂ ಕಮ್ಮಿಯಾಗುತ್ತದೆ. ನಿಮ್ಮ ಮನೆಯೊಳಗೆ ಉತ್ತಮ ಗಾಳಿ, ಬೆಳಕು ಇರುವಂತೆ ನೋಡಿಕೊಳ್ಳಿ, ಹಗಲು ಹೊತ್ತನ್ನು ಚೆನ್ನಾಗಿ ಉಪಯೋಗಿಸಿ. ಆಗ ಫ್ಯಾನ್, ವಾತಾನುಕೂಲಿ, ವಿದ್ಯುತ್ ದೀಪಗಳು, ಇವೆಲ್ಲದರಲ್ಲಿ ವಿದ್ಯುತ್ ಶಕ್ತಿಯನ್ನು ಉಳಿಸಬಹುದು. ನವೀಕರಿಸಲು ಸಾಧ್ಯವಿರುವ ಮೂಲಗಳನ್ನು ಉಪಯೋಗಿಸಿ. ಉದಾ: ಸೋಲಾರ್ ನೀರಿನ ಹೀಟರ್, ಸೋಲಾರ್ ದೀಪಗಳು.
  • ಸಾಧ್ಯವಾದಾಗಲೆಲ್ಲಾ ರಾಸಾಯನಿಕ ಮುಕ್ತ, ಸಾವಯವ ಹಾಗೂ ಸಸ್ಯಮೂಲದ ಆಹಾರ ಪದಾರ್ಥಗಳನ್ನೇ ಖರೀದಿಸಿರಿ. ಇದರಿಂದ ಪರಿಸರಕ್ಕೂ ನಿರಾಳ, ನಿಮ್ಮ ಆರೋಗ್ಯಕ್ಕೂ ವರದಾನ.
  • ಸುತ್ತಮುತ್ತಲೂ ಹಸಿರು ಹೆಚ್ಚುವಂತೆ ಪ್ರಯತ್ನ ಮಾಡಿ. ನಿಮ್ಮ ಹುಟ್ಟುಹಬ್ಬದಂದು, ಇತರ ವಿಶೇಷ ದಿನಗಳಂದು ಗಿಡ ನೆಡುವ ಕಾರ್ಯ ಕೈಗೊಳ್ಳಿ, ಅದನ್ನು ನೀರೆರೆದು ಪೋಷಿಸಲು ಮರೆಯಬೇಡಿ.

  • ಇಂಗು ಗುಂಡಿಗಳನ್ನು ಸ್ಥಾಪಿಸಿ. ಮನೆಯ ಸುತ್ತಮುತ್ತಲೂ ಹರಿದು ಪೋಲಾಗಿಹೋಗುವ ಮಳೆನೀರನ್ನು ಇಂಗಿಸಲು ವ್ಯವಸ್ಥೆ ಕಲ್ಪಿಸಲು ಸಾಧ್ಯವಾದರೆ ಮಾಡಿ.
Similar questions