Geography, asked by ashishaj2516, 11 months ago

Kannada essays about friendship

Answers

Answered by Nathashachinnu6
1

ಅವನೊಬ್ಬನಿರ್ತಾನೆ... ಎಂಥ ಸಮಯದಲ್ಲೂ 'ನಾನಿದ್ದೀನಿ ನಿಂಜೊತೆ' ಅನ್ನೋಕೆ, ಅತ್ತಾಗ ಸಂತೈಸೋಕೆ, ನಕ್ಕಾಗ ಜೊತೆಯಾಗೋಕೆ. ಈ 'ಸ್ನೇಹಿತ' ಅನ್ನೋ ಮೂರಕ್ಷರವನ್ನು ಒಂದು ವ್ಯಕ್ತಿಯಲ್ಲಿ ಕಟ್ಟಿಹಾಕೋದು ಕಷ್ಟವೇ. ಆಗಸ್ಟ್ ತಿಂಗಳ ಮೊದಲ ಭಾನುವಾರ(ಈ ಬಾರಿ ಆಗಸ್ಟ್ 05) ಬರುತ್ತಿದ್ದಂತೆಯೇ 'ಹ್ಯಾಪಿ ಫ್ರೆಂಡ್ಶಿಪ್ ಡೇ' ಎಂದು ಕೈಕುಲುಕಿದ ಮಾತ್ರಕ್ಕೆ ಅವನ ಋಣ ತೀರಿಹೋಗೋಲ್ಲ!

ಪ್ರತಿ ವ್ಯಕ್ತಿಯ ಬದುಕಿನಲ್ಲೂ ಈ ಸ್ನೇಹ ಪ್ರಪಂಚ ಎಷ್ಟು ವಿಶಾಲ! ಆಗಷ್ಟೇ ಭೂಮಿ ಎಂಬ ಸುಂದರ ಪ್ರಪಂಚಕ್ಕೆ ಬಂದು ಕಣ್ಬಿಟ್ಟ ಕ್ಷಣ... ಪುಟ್ಟ ಕೈಮೇಲೆ ಅಮ್ಮನ ಅಕ್ಕರೆಯ ಬೆರಳು ಆಡಿದರೆ ಈ ಅಮ್ಮಂಗಿಂತ ಬೇರೆ ಸ್ನೇಹಿತೆ ಇಲ್ಲ! ಪುಟ್ಟ ಪುಟ್ಟ ಹೆಜ್ಜೆ ಇಡುವಾಗಲೂ ಬೀಳದಂತೆ ಕಣ್ಣಲ್ಲಿ ಕಣ್ಣಿಟ್ಟು ನೋಡುವಾಗ ಈ ಅಪ್ಪನ ಅಕ್ಕರೆಗಿಂತ ಮಿಗಿಲಾದ ಸ್ನೇಹವಿಲ್ಲ! ಯಾರೋ ಕೊಟ್ಟ ಮಿಠಾಯಿಯಲ್ಲಿ, ಅರ್ಧ ಭಾಗವನ್ನು ಗುಬ್ಬಿ ಎಂಜಲು ಮಾಡಿ ತನ್ನ ಪುಟ್ಟ ಕೈಯಲ್ಲಿಟ್ಟುಕೊಂಡು ತಿನ್ನಿಸುವಾಗ ಈ ಅಕ್ಕಂಗಿಂತ ಬೇರೆ ಸ್ನೇಹಿತರಿಲ್ಲ! ತುಂಟಾಟವಾಡುವ ತಂಗಿ, ಸಲಹೆ ನೀಡುವ ಅಣ್ಣ, ಕತೆ ಹೇಳುವ ಅಜ್ಜ-ಅಜ್ಜಿ... ಎಲ್ಲರೂ ಒಂದಿಲ್ಲೊಂದು ರೀತಿಯಲ್ಲೇ ಈ ಸ್ನೇಹ ಪ್ರಪಂಚದ ಆಜೀವ ಸದಸ್ಯರೇ! ಕಾಯಾ ವಾಚಾ ಮನಸಾ ಜೊತೆಯಲ್ಲಿರುತ್ತೇನೆಂದು ಸಪ್ತಪದಿ ತುಳಿದ ಸಂಗಾತಿಯೂ ಆತ್ಮಸ್ನೇಹಿತನೇ!

Similar questions