Kannada prabandha about dasara
Answers
ರಾಜ್ಯ ಸರ್ಕಾರೀ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಎಚ್ ಡಿ ಕುಮಾರಸ್ವಾಮಿ | Oneindia Kannada ಮೈಸೂರು, ಅಕ್ಟೋಬರ್ 10 : ಒಂದು ಕಾಲದಲ್ಲಿ ಆಳರಸರ ಮಹೋತ್ಸವವಾಗಿ ಮೆರೆದು ಇಂದು ಬದಲಾದ ಕಾಲಘಟ್ಟದಲ್ಲಿ ನಾಡಹಬ್ಬವೆಂದು ಕರೆಯಲ್ಪಡುತ್ತಿರುವ ಮೈಸೂರು ದಸರಾ ಮಹೋತ್ಸವಕ್ಕೆ ನಾಲ್ಕು ಶತಮಾನಗಳಿಗೂ ಹೆಚ್ಚಿನ ಇತಿಹಾಸವಿದೆ. ನಮ್ಮ ಭಾರತೀಯ ಸಂಸ್ಕೃತಿಯ ಚರಿತ್ರೆಯಲ್ಲೇ ಇಷ್ಟೊಂದು ಸುದೀರ್ಘ ಕಾಲ ನಡೆದು ಬಂದಿರುವ ಮತ್ತೊಂದು ಹಬ್ಬ ಕಾಣಸಿಗುವುದು ಬಹಳ ಅಪರೂಪ. ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಈ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆಯುಂಟು. ಕರ್ನಾಟಕದ ಇತಿಹಾಸದಲ್ಲಿ ಸುವರ್ಣ ಯುಗವನ್ನು ಸೃಷ್ಟಿಸಿ ವಿಜಯನಗರ ಸಾಮ್ರಾಜ್ಯ ಕಟ್ಟಿ ವೈಭವದಿಂದ ಮೆರೆದವರು ವಿಜಯನಗರ ಅರಸರು. [ಮೈಸೂರು ಅರಮನೆ ಆಯುಧ ಪೂಜೆಯ ವೈಖರಿ, ನಲಿದಾಡಿದ ಯದುವೀರ್ ಪತ್ನಿ ತ್ರಿಷಿಕಾ ಕುಮಾರಿ]
ಅವರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ ಕೇಂದ್ರಗಳಾಗಿದ್ದವು.
ತಮ್ಮ ಸಾಮ್ರಾಜ್ಯದ ಶಕ್ತಿ-ಸಾಮಥ್ರ್ಯ, ಸಂಪತ್ತು-ಸಮೃದ್ಧಿ, ವೈಭವ-ವೈಭೋಗ, ವೀರತ್ವ-ಧೀರತ್ವ, ಕಲೆ-ಸಾಹಿತ್ಯ, ಸಂಗೀತ-ನೃತ್ಯ,ಸಂಸ್ಕೃತಿ-ಸಂಪನ್ನತೆ .... ಹೀಗೆ ಸಕಲ ವಿಧಗಳಲ್ಲೂ ತಮ್ಮ ಹಿರಿಮೆ-ಗರಿಮೆಗಳನ್ನು ತೋರ್ಪಡಿಸಿಕೊಳ್ಳುವ ಹಿನ್ನೆಲೆಯಲ್ಲಿ ಬಹುಮುಖ್ಯವಾಗಿ ವಿಜಯದ ದ್ಯೋತಕವಾಗಿ ವಿಜಯದಶಮಿಯ ಈ ದಸರಾ ಮಹೋತ್ಸವವನ್ನು ವಿಜಯನಗರ ಅರಸರು ಆಚರಿಸುತ್ತಿದ್ದರು. ಈ ಉತ್ಸವವನ್ನು ವೀಕ್ಷಿಸಲು ದೇಶ-ವಿದೇಶಗಳ ಗಣ್ಯಾತಿಗಣ್ಯರು, ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿದ ದಾಖಲೆಗಳುಂಟು. ಅಷ್ಟೇ ಅಲ್ಲ 11ನೇ ಶತಮಾನದಲ್ಲೇ ಇಲ್ಲಿಗೆ ಭೇಟಿ ನೀಡಿದ್ದ ವಿದೇಶಿ ಪ್ರವಾಸಿಗರಾದ ಅಲ್ಬೆರೋನಿ, 15-16ನೇ ಶತಮಾನದಲ್ಲಿ ಬಂದಿದ್ದ ಪರ್ಷಿಯಾದ ಅಬ್ದುಲ್ ರಜಾಕ್, ಇಟಲಿಯ ನಿಕೋಲಕೊಂಟಿ, ಪೋರ್ಚುಗೀಸಿನ ಡೊಮಿಂಗೋಪಾಯಸ್ (1520-1522) ಮೊದಲಾದವರು ವಿಜಯನಗರ ಸಾಮ್ರಾಜ್ಯದ ವೈಭವೋಪೇತವಾದ ಈ ಮಹೋತ್ಸವವನ್ನು ಕೊಂಡಾಡಿ ತಮ್ಮ ಪ್ರವಾಸ ಕಥನಗಳಲ್ಲಿ ದಾಖಲಿಸಿದ್ದಾರೆ. ವಿಜಯದಶಮಿಯ ದಸರಾ ಮಹೋತ್ಸವವನ್ನು ವಿಜಯನಗರ ಸಾಮ್ರಾಜ್ಯದ ಪತನದ ನಂತರ ಮುಂದುವರಿಸಿಕೊಂಡು ಬಂದವರು ಯದುವಂಶದ ಮೈಸೂರು ಒಡೆಯರು. ಇವರಲ್ಲಿನ 9ನೇ ಆಳ್ವಿಕೆಯ ರಾಜ ಒಡೆಯರು (1578-1617) ಅಂದು ತಮ್ಮ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲಿ 1610ರಲ್ಲಿ ವಿಜಯನಗರದ ರಾಜಪರಂಪರೆಯಂತೆ ನವರಾತ್ರಿ ಉತ್ಸವದ ವಿಜಯದಶಮಿಯ ದಸರಾ ಮಹೋತ್ಸವವನ್ನು ಮೊದಲಿಗೆ ಆರಂಭಿಸಿದರು. ಥೇಟ್ ವಿಜಯನಗರ ಅರಸರ ಸಂಪ್ರದಾಯದಂತೆಯೇ ದಸರಾಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಶಾಸ್ತ್ರ ಹಾಗೂ ವಿಧಿ-ವಿಧಾನಗಳನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅಳವಡಿಸಿಕೊಂಡರು. ಈ ಪ್ರಕಾರ ಅಶ್ವಯುಜ ಶುದ್ಧ ಪ್ರಥಮೆಯಂದು ನವರಾತ್ರಿ ಉತ್ಸವ ಶುರುವಾಗಿ ಮಹಾನವಮಿಯ ಕಡೇ ದಿನದವರೆವಿಗೂ ಪ್ರತಿನಿತ್ಯ ಪೂಜೆ-ಪುನಸ್ಕಾರ, ಪೂರ್ವಾಹ್ನ ಮತ್ತು ಮಧ್ಯಾಹ್ನ ಸಿಂಹಾಸನಾರೋಹಣ, ಒಡ್ಡೋಲಗ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಬೇಕೆಂದು ಪಕ್ಕಾ ವಿಧೇಯಕವನ್ನೇ ಮಾಡಿ ದಸರಾ ಹಬ್ಬವನ್ನು ಆಚರಣೆಗೆ ತಂದಿದ್ದು, 1799ರವರೆಗೂ ಮೈಸೂರು ರಾಜ್ಯದ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲೇ ದಸರಾ ನಡೆಯುತ್ತಿತ್ತು. ಹೈದರಾಲಿ ಮತ್ತು ಟಿಪ್ಪುವಿನ ಆಳ್ವಿಕೆಯ ನಂತರ ಮತ್ತೆ ಅಧಿಕಾರಕ್ಕೆ ಬಂದ ಯದುಕುಲತಿಲಕ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಆಳ್ವಿಕೆ ಕಾಲಕ್ಕೆ (1799-1868) ರಾಜ್ಯದ ರಾಜಧಾನಿ ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗವಾಯಿತು. ಅಲ್ಲಿಂದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಅತೀವ ಕಾಳಜಿಯಿಂದ ಮತ್ತಷ್ಟು ವಿಜೃಂಭಣೆಯಿಂದ 1800ರಲ್ಲಿ ಮೈಸೂರಿನಲ್ಲಿ ದಸರಾ ಪ್ರಾರಂಭವಾಗಿ "ಮೈಸೂರು ದಸರಾ" ಎಂದು ವಿಶ್ವವಿಖ್ಯಾತಿಯಾಯಿತು. ವಿಜಯದಶಮಿಯಂದು ಮಧ್ಯಾಹ್ನ ಮಹಾರಾಜರು ಅಲಂಕೃತ ಆನೆಯ ಮೇಲಿನ ಚಿನ್ನದ ಅಂಬಾರಿಯನ್ನೇರಿ ವೈಭವದ ಜಂಬೂಸವಾರಿಯಲ್ಲಿ ಅಂಬಾ ವಿಲಾಸ ಅರಮನೆಯಿಂದ ಹೊರಟು ಬನ್ನಿಮಂಟಪಕ್ಕೆ ತೆರಳಿ ಬನ್ನಿಪೂಜೆ ಮಾಡಿ ಧ್ವಜ ಹಾರಿಸಿ ಸೈನಿಕರಿಂದ ವಂದನೆ ಸ್ವೀಕರಿಸಿ ನಂತರ ತಾವು ಬಂದ ರಾಜ ಮಾರ್ಗದಲ್ಲೇ ಅರಮನೆಗೆ ವಾಪಸ್ಸಾಗುವ ಈ ಜಂಬೂ ಸವಾರಿಯೇ ಮೈಸೂರು ದಸರೆಯ ಅಂದಿನ ಪ್ರಮುಖ ಆಕರ್ಷಣೆಯಾಗಿತ್ತು. ಇನ್ನಷ್ಟು ಮೈಸೂರು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ