Social Sciences, asked by keehavamurthy521, 3 months ago

kannadada modala Shila shaasana yaavudu​

Answers

Answered by lexi07
0

Answer:

ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ. ಎಚ್. ಕೃಷ್ಣ ಎಂಬುವವರಿಂದ ಸಂಶೋಧಿಸಲ್ಪಟ್ಟಿತು. ಇದು ಹದಿನಾರು ಸಾಲುಗಳನ್ನು ಹೊಂದಿದ್ದು, ಮರಳ ಶಿಲ್ಪದ ಮೇಲೆ ಕೆತ್ತಲ್ಪಟ್ಟಿದೆ. ಇದು ಹಳಗನ್ನಡ ಹಾಗೂ ಬ್ರಾಹ್ಮೀ ಲಿಪಿಗಳನ್ನು ಹೋಲುವಂತಹ ಕನ್ನಡ ಲಿಪಿಯಲ್ಲಿದೆ. ಕದಂಬ ವಂಶದ ಕಾಕುಸ್ಥವರ್ಮ ಬರೆಸಿದ ದತ್ತಿಶಾಸನ ಇದಾಗಿದೆ. ಶತೃರಾಜರ ಮೇಲೆ ಹೋರಾಡಿ ಗೆದ್ದ ವಿಜಯರಸ ಎಂಬ ಯೋಧನಿಗೆ, ಪಲ್ಮಿಡಿ ಮತ್ತು ಮೂಳಿವಳ್ಳಿಯನ್ನು ದತ್ತಿಯಾಗಿ ಬಿಟ್ಟ ರಾಜಾಜ್ಞೆಯನ್ನು ಈ ಶಾಸನ ನಿರೂಪಿಸುತ್ತದೆ. ಹಲ್ಮಿಡಿ ಶಾಸನ ಸಂಸ್ಕೃತ ಪ್ರಭಾವಕ್ಕೆ ಒಳಗಾಗಿದ್ದರೂ, ಆ ಕಾಲದಲ್ಲಿ ಬಳಕೆಯಲ್ಲಿದ್ದ ಪ್ರೌಢ ಕನ್ನಡವನ್ನು ನಿರೂಪಿಸುತ್ತದೆ.

Similar questions