India Languages, asked by rockgirijesh1434, 11 months ago

Kittur rani ambedkar information in kannada information in kannada

Answers

Answered by lakshmimrg
2

Answer:

ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ. ಚನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

ಡಾ.ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬)- ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು. , ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು 'ಸಂವಿಧಾನ ಶಿಲ್ಪಿ' ಎಂದು ಕರೆಯುತ್ತಾರೆ.

Similar questions