India Languages, asked by amitabh8486, 11 months ago

Namma nechina Karnataka Kannada essay short paragraph

Answers

Answered by help7oo645o984
6

Explanation:

ಕರ್ನಾಟಕ

ಕರ್ನಾಟಕ ಭಾರತದ ನಾಲ್ಕು ಪ್ರಮುಖ ದಾಕ್ಷಿಣಾತ್ಯ ರಾಜ್ಯಗಳಲ್ಲಿ ಒಂದು. ೧೯೭೩ ಕ್ಕೆ ಮೊದಲು ಕರ್ನಾಟಕದ ಹೆಸರು "ಮೈಸೂರು ರಾಜ್ಯ" ಎಂದಿದ್ದಿತು. ಇದಕ್ಕೆ ಕಾರಣ ಕರ್ನಾಟಕದ ಮೊದಲ ಸೃಷ್ಟಿ ಮೈಸೂರು ಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ). ೧೯೫೬ ರಲ್ಲಿ ಸುತ್ತಮುತ್ತಲ ರಾಜ್ಯಗಳ ಕನ್ನಡ ಪ್ರಧಾನ ಪ್ರದೇಶಗಳನ್ನು ಸೇರಿಸಲಾಯಿತು.

"ಕರ್ನಾಟಕ" ಎಂಬ ಹೆಸರಿಗೆ ಅನೇಕ ವ್ಯುತ್ಪತ್ತಿಗಳು ಪ್ರತಿಪಾದಿಸಲ್ಪಟ್ಟಿವೆ. ಎಲ್ಲಕ್ಕಿಂತ ಹೆಚ್ಚಾಗಿ ಒಪ್ಪಲ್ಪಟ್ಟಿರುವ ವ್ಯುತ್ಪತ್ತಿ ಎಂದರೆ ಕರ್ನಾಟಕ ಎಂಬುದು "ಕರು+ನಾಡು" ಎಂಬುದರಿಂದ ವ್ಯುತ್ಪತ್ತಿಯನ್ನು ಪಡೆದಿದೆ. ಕರು ನಾಡು ಎಂದರೆ "ಎತ್ತರದ ಪ್ರದೇಶ" ಎಂದು ಅರ್ಥ. ಕರ್ನಾಟಕ ರಾಜ್ಯದ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ ೧೫೦೦ ಅಡಿ ಇದ್ದು ಇದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರವುಳ್ಳ ರಾಜ್ಯಗಳಲ್ಲಿ ಒಂದು.

ಕರ್ನಾಟಕವು ಪಶ್ಚಿಮದಲ್ಲಿ ಅರಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳನಾಡುವಿನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

Answered by mathapatiharsh6
1

Answer:

hi

it is best

Explanation:

harshshsvvdbsjandbdb

Similar questions