own sentence about corona in kannada
Answers
Answer:
ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.
ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.
ಕೊರೊನಾ ವೈರಸ್ ಸೋಂಕು ಎಂದರೇನು?
ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.
ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.
ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.
ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.
ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.
ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.
*ಶೀನು ಮತ್ತು ಕೆಮ್ಮಿನ ಗಾಳಿಯಿಂದ.
*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ
*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.
*ಅಪರೂಪದಲ್ಲಿ ಮಲದ ಮೂಲಕ
Explanation:
Hope it helps you mate