India Languages, asked by shifatajshaikh9478, 3 months ago

ಗಾಂಧಿಜಯಂತಿಯ ಬಗ್ಗೆ ವರದಿ ಬರೆಯಿರಿ


please any body answer this

i will mark them as brainliest if answer will correct ​

Answers

Answered by Anonymous
1

ಮಹಾತ್ಮ ಗಾಂಧೀಜಿ ಗಾಂಧಿ ಜಯಂತಿ - ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆ. ಪ್ರತಿವರ್ಷ ಅಕ್ಟೋಬರ್ ೦೨ ರಂದು ಗಾಂಧಿ ಜಯಂತಿ ಆಚರಿಸಲಾಗುತ್ತದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನೂ ಇದೇ ದಿನ ಆಚರಿಸಲಾಗುತ್ತದೆ.

ಗಾಂಧಿ ಜಯಂತಿಯ ಮಹತ್ವ:

ಅಕ್ಟೋಬರ್ 2 ನಮ್ಮ ದೇಶಾದ್ಯಂತ ಆಚರಿಸುವ ರಾಷ್ಟ್ರೀಯ ಹಬ್ಬ ಗಾಂಧಿ ಜಯಂತಿ. ಎಲ್ಲಾ ಶಾಲೆಗಳಲ್ಲಿ, ಸರ್ಕಾರಿ ಕಛೇರಿಗಳಲ್ಲಿ ಗಾಂಧಿಜಿಯವರ ಭಾವ ಚಿತ್ರವನ್ನು ಇಟ್ಟು ಪೂಜೆಯನ್ನು ಮಾಡುತ್ತಾರೆ. ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲಿ ಅಂದು ಗಾಂಧಿಜಿಯವರ ಬಗ್ಗೆ ಮತ್ತು ಅವರ ಸಾಧನೆಗಳ ಬಗ್ಗೆ ಜೊತೆಗೆ ಅವರ ಜೀವನ ಚರಿತ್ರೆಯನ್ನು ಮಕ್ಕಳಿಗೆ ಹೇಳುತ್ತಾರೆ.

ಅದರ ಜೊತೆಗೆ ಅಂದು ವಿಶೇಷವಾಗಿ ಶ್ರಮದಾನವನ್ನು ಸಹ ಹಮ್ಮಿಕೊಂಡು ಆಯಾ ಗ್ರಾಮದಲ್ಲಿ ಶ್ರಮದಾನ ಮಾಡುತ್ತಾರೆ. ಶಾಲಾ ಮಕ್ಕಳು ಸಹ ಬೆಳಿಗ್ಗೆ ಬೇಗನೆ ಎದ್ದು ಜಳಕ್ಕೆ ಮಾಡಿ, ರಾಷ್ಟ್ರ ಪಿತನಿಗೆ ನಮಿಸಿ, ಅವರ ತತ್ವಗಳನ್ನು ಜೀವನದಲ್ಲಿ ತೊಡಗಿಸಿಕೊಳ್ಳಲು ಸಿದ್ದರಾಗಿ ಶಾಲೆಗೆ ಬರುತ್ತಾರೆ.

ಇಂತಹ ಮಹಾನ ವ್ಯಕ್ತಿಯ ಜನ್ಮ ದಿನವಾದ ಅಕ್ಟೋಬರ್ 2 ರಂದು ರಾಜ್ಯಾದ್ಯಂತ ಮದ್ಯಪಾನವನ್ನು ಸಹ ಸರ್ಕಾರ ನಿಷೇದಿಸಿರುವುದು ಹೆಮ್ಮೆಯ ಸಂಗತಿಯು ಹೌದು. ನಮಗೆ ತಿಳಿದ ಹಾಗೆ ಗಾಂಧೀಜಿ ಯವರ ಹುಟ್ಟಿದ ದಿನವನ್ನು ಗಾಂಧಿ ಜಯಂತಿ ಎಂದು ಆಚರಿಸಲಾಗುವುದು.

ಗಾಂಧಿಯವರ ಜನನ, ಜೀವನ:

ಇವರ ಪೂರ್ಣ ಹೆಸರು ಮೋಹನದಾಸ್ ಕರಮ‍ಚಂದ್ ಗಾಂಧಿ ಅಕ್ಟೋಬರ್ 2, 1869 ರಲ್ಲಿ ಭಾರತದ ಗುಜರಾತ್ ರಾಜ್ಯದ ಪೋರಬಂದರ್ ನಲ್ಲಿ ಜನಿಸಿದರು. ಇವರ ತಂದೆ ಕರಮಚಂದ್ ಗಾಂಧಿ, ತಾಯಿ ಪುತಲೀಬಾಯಿ. 13 ನೆಯ ವಯಸ್ಸಿನಲ್ಲಿ ಗಾಂಧೀಜಿ ಕಸ್ತೂರಿ ಬಾ ಅವರನ್ನು ವಿವಾಹವಾದರು.

ನಂತರ ಇವರಿಗೆ ನಾಲ್ಕು ಮಕ್ಕಳು ಜನಿಸಿದರು : ಹರಿಲಾಲ್ ಗಾಂಧಿ, ಮಣಿಲಾಲ್ ಗಾಂಧಿ , ರಾಮದಾಸ್ ಗಾಂಧಿ ಮತ್ತು ದೇವದಾಸ್ ಗಾಂಧಿ. 4 ನೇ ವಯಸ್ಸಿನಲ್ಲಿ ಗಾಂಧೀಜಿ ಲಂಡನ್ ನಗರದ ಯೂನಿವರ್ಸಿಟಿ ಕಾಲೇಜಿನಲ್ಲಿ ವಕೀಲಿ ವೃತ್ತಿಗಾಗಿ ತರಬೇತಿ ಪಡೆಯಲು ತೆರಳಿ ತರಬೇತಿಯನ್ನು ಮುಗಿಸಿ ಬಂದು.ಮುಂಬಯಿ ನಗರದಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಲು ಬಹಳ ಪ್ರಯತ್ನಿಸಿದರು. ಆದರೆ ಹೆಚ್ಚು ಯಶಸ್ಸು ಕಾಣದಿದ್ದರಿಂದ ಎರಡು ವರ್ಷಗಳ ನಂತರ ದಕ್ಷಿಣ ಆಫ್ರಿಕಾಕ್ಕೆ ಕೆಲಸದ ಮೇಲೆ ತೆರಳಿದರು. ಅಲ್ಲಿ ಭಾರತೀಯ ನಿವಾಸಿಗಳಿಗೆ ಸಮಾನ ಹಕ್ಕುಗಳನ್ನು ನೀಡದ ಬ್ರಿಟಿಷ್ ಸರ್ಕಾರದ ವರ್ಣಭೇದ ನೀತಿಯನ್ನು ನೋಡಿ ಬೇಸರಗೊಂಡರು.

Similar questions