plzzz send me speech about Valmiki jayanthi in kannada plz
Answers
Answer:
Valmiki Jayanti celebrates the birth anniversary of the great poet and sage Valmiki. This celebration is more popular in North India than South India. However, it is not an official government holiday. Valmiki Jayanti is typically celebrated in between September and October during the Hindu Ashwin month on a full moon day.
On this day, people pay homages and respect to the great saint. He is worshipped with fill fervor on this day. Prayers are also offered to his portrait. In some villages and towns, various processions are held with his portrait being taken from place to place. Temples dedicated to Lord Ram are decorated with flowers and incense sticks are burnt to create a blissful atmosphere. Bhajans and kirtans are also held here to mark the occasion apart from recitations from the Ramayana.
Charity and donation are also done on a large scale on this day to help the needy and poor people. Doing these acts of kindness on Valmiki Jayanti is believed to be quite rewarding and fruitful.
Explanation:
Answer:
here is your answer speech on valmiki jayanthi in kannada
Explanation:
ಭಾರತದ ಮೊಟ್ಟಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ 'ಆದಿಕವಿ' ಮಹರ್ಷಿ ವಾಲ್ಮೀಕಿಯ ಜಯಂತ್ಯುತ್ಸವವನ್ನು ಅಕ್ಟೋಬರ್ 24ರಂದು ಕರ್ನಾಟಕ ರಾಜ್ಯಾದ್ಯಂತ ಆಚರಿಸುತ್ತಿರುವುದು ಅತ್ಯಂತ ಅರ್ಥಪೂರ್ಣವಾಗಿದೆ.
ರಾಮಾಯಣವು ಭಾರತೀಯರ ಜೀವನಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ. ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ಭರತಖಂಡದಲ್ಲಿನ ಅರಣ್ಯಗಳು, ಪರ್ವತಗಳು, ನದಿಗಳು, ಸರೋವರಗಳು, ಸಮುದ್ರಗಳು ಮತ್ತು ಜಲಪಾತಗಳ ಪ್ರಕೃತಿ ಸೌಂದರ್ಯವನ್ನು ವರ್ಣಿಸಿದ್ದಾರೆ. ವಿವಿಧ ಪಾತ್ರಗಳ ಮುಖಾಂತರ ಕೌಟುಂಬಿಕ ಮೌಲ್ಯಗಳು ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ. ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೋಭವ, ಪಿತೃದೇವೋಭವ, ಆಚಾರ್ಯದೇವೋಭವ, ಅತಿಥಿದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ. ಇಂತಹ ಅನನ್ಯವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯನ್ನು 'ಕವಿಗಳ ಕವಿ' ಎಂದು ಮಹಾಕವಿ ಕಾಳಿದಾಸ ಗೌರವಿಸಿದ್ದಾನೆ. ಭಾರತದ ಪ್ರಥಮ ಪ್ರಧಾನ ಮಂತ್ರಿಯಾಗಿದ್ದ ಜವಾಹರಲಾಲ್ ನೆಹರು ಅವರು ರಚಿಸಿರುವ 'ಡಿಸ್ಕವರಿ ಆಫ್ ಇಂಡಿಯಾ' ಪುಸ್ತಕದಲ್ಲಿ, ಜನರ ಮನಸ್ಸಿನ ಮೇಲೆ ಅಗಾಧವಾದ ಪ್ರಭಾವವನ್ನು ಬೀರಿರುವ ಮಹಾಕಾವ್ಯ ರಾಮಾಯಣ ಎಂಬುದಾಗಿ ಉಲ್ಲೇಖಿಸಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪುರವರು, ''ರಾಮಾಯಣದಂತಹ ಮಹಾಕಾವ್ಯ ಮತ್ತು ವಾಲ್ಮೀಕಿಯಂತಹ ಮಹಾಕವಿ ನಮಗೆ ದೊರೆತಿರುವುದು ಭುವನದ ಭಾಗ್ಯ,'' ಎಂದು ಬಣ್ಣಿಸಿದ್ದಾರೆ