ಪರಿಸರ ಸಂರಕ್ಷಣೆ ಇಂದಿನ ಅಗತ್ಯ ಪ್ರಬಂಧ small essay in kannada (1 page essay)
Answers
Explanation:
ನಿಸರ್ಗದ ಜೊತೆ ಸಮಾನ್ಯ ಜೀವಿಯಂತೆ ಬೆರೆತು ಬಾಳಬೇಕಾದ ಮಾನವ ಅಭಿವೃದ್ದಿ ಎನ್ನುವ ಮಾನದಂಡದಿಂದ ಸಂಪೂರ್ಣ ಕುರುಡಾಗಿದ್ದಾನೆ. ತನ್ನ ಸ್ವಾರ್ಥ ಬದುಕಿಗಾಗಿ ಇಂದು ಪರಿಸರ ನಾಶಮಾಡುತ್ತಿರುವುದರಿಂದ ವನ್ಯ ಜೀವಸಂಕುಲಗಳ ನಾಶ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮನುಷ್ಯ ತಾನು ಸಕಲ ಜೀವ ಸಂಕುಲಗಳಂತೆ ಒಂದು ಜೀವಿ ಎನ್ನುವುದನ್ನು ಮರೆತು ಇಡೀ ಜೀವ ಸಂಕುಲ, ಅರಣ್ಯ ಸಂಪತ್ತನ್ನು ನಾಶ ಮಾಡಲು ಹೊರಟಿದ್ದಾನೆ. ನೈಸರ್ಗಿಕ ಪ್ರದೇಶಗಳನ್ನು ಹಾಗೂ ಅಳಿವಿನಂಚಿನಲ್ಲಿರುವ ಜೀವ ಸಂಕುಲವನ್ನು ರಕ್ಷಿಸಿ ಉಳಿಸಬೇಕಾದ ಮನುಷ್ಯನೇ ಇಂದು ಅಧಿಕಾರ ಮತ್ತು ಸಂಪತ್ತಿನ ಆಸೆ ಆಮಿಷಗಳಿಗೆ ಬಲಿಯಾಗಿ ಪರಿಸರ ನಾಶಕ್ಕೆ ಮುಂದಾಗಿರುವುದು ದುರಾದೃಷ್ಟಕರ ಸಂಗತಿ.
ಯಾವುದು ಪರಿಸರದ ಮೇಲೆ ದುಷ್ಟರಿಣಾಮ ಬೀರುತ್ತದೆ, ಯಾವುದು ಪೂರಕವಾಗುತ್ತದೆ ಎನ್ನುವ ಸಾಮಾನ್ಯ ಜ್ಞಾನವು ಇಲ್ಲದೆ ವಿಜ್ಞಾನ ಮತ್ತು ತಂತ್ರಜ್ಞಾನಗಳ ದಾಸರಾಗಿದ್ದೇವೆ. ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ದೆಸೆಯಿಂದ ಮಾನವನ ಜೀವನ ಹಾಗೂ ಚಟುವಟಿಕೆಗಳು ಅತ್ಯಂತ ಸಂಕೀರ್ಣವಾಗಿವೆ. ಹೆಚ್ಚಿನ ಮನುಷ್ಯರು ಪರಿಸರಕ್ಕೆ ಮಾರಕವಾಗುವಂತ ಜೀವನ ಕ್ರಮವನ್ನು ಅನುಸರಿಸಿಕೊಂಡು ಪರಿಸರದಲ್ಲಿ ನಾವು ಒಂದು ಜೀವಿಸಂಕುಲ ಎನ್ನುವುದನ್ನೆ ಮರೆತುಬಿಟ್ಟಿದ್ದೇವೆ. ಇತರ ಜೀವಿಗಳಂತೆ ಮನುಷ್ಯ ಜೀವಿಯೂ ಪ್ರಕೃತಿಯ ನಿಯಮಗಳನ್ನು ಪಾಲಿಸಿದ್ದರೆ ಬರಗಾಲವಾಗಿರಬಹುದು, ಹವಾಮಾನ ವೈಪರಿತ್ಯ, ಪರಿಸರ ಮಾಲಿನ್ಯ ಇದ್ಯಾವ ಸಮಸ್ಯೆಗಳು ಬರುತ್ತಿರಲಿಲ್ಲ.
ಪರಿಸರವನ್ನು ಬೆಳಸಿ ಸಂರಕ್ಷಿಸಬೇಕಾದ ಮಾನವ, ಪರಿಸರವನ್ನು ನಾಶಮಾಡುವುದರ ಜೊತೆಗೆ ಮಾಲಿನ್ಯ ಮಾಡುತ್ತಿದ್ದು ಇದರಿಂದಾಗಿ ಕೆಲವು ಜೀವ ಸಂಕುಲಗಳು ನಾಶವಾಗುತ್ತಿವೆ. ಇದರ ಪ್ರತಿಫಲ ಮನುಷ್ಯನಿಗೂ ತಟ್ಟಿದೆ. ಇದಕ್ಕೆ ಒಂದು ಸ್ಪಷ್ಟವಾದ ಉದಾಹರಣೆಯೆಂದರೆ 1984ರಲ್ಲಿ ಮಧ್ಯಪ್ರದೇಶದ ಭೂಪಾಲ್‍ನಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ. ಇದರಿಂದಾಗಿ ಸಾವಿರಾರು ಜನರು ಮರಣಹೊಂದಿರುವ ಘಟನೆ ನಮ್ಮ ಕಣ್ಣ ಮುಂದಿದ್ದರು ಎಚ್ಚೆತ್ತುಕೊಳ್ಳದ ಮನುಷ್ಯ ಕುಲ ಸಕಲ ಜೀವ ರಾಶಿಗಳ ಮಾರಣಹೋಮಕ್ಕೆ ಕಡಿವಾಣ ಹಾಕದಿದ್ದರೆ ಮನುಷ್ಯ ಮುಂದೊಂದು ದಿನ ಇತರ ಜೀವಿಗಳಂತೆ ಅವನತಿ ಹೊಂದುವುದು ಖಂಡಿತ.
ಒಂದು ಕಡೆ ಮಿತಿಮೀರಿ ಬೆಳೆಯುತ್ತಿರುವ ಜನಸಂಖ್ಯೆ, ಅಭಿವೃದ್ಧಿಯ ಹೆಸರಿನಲ್ಲಿ ಪರಿಸರದ ನಾಶ, ಹೀಗೆ ಮನುಷ್ಯ ತನ್ನ ಅಗತ್ಯವಸ್ತುಗಳನ್ನು ಹಾಗೂ ಇತರ ಬೇಡಿಕೆಗಳನ್ನು ಪೂರೈಸಿಕೊಳ್ಳುವ ಬರದಲ್ಲಿ ಪರಿಸರವನ್ನು ಮನಸ್ಸಿಗೆ ಬಂದ ಹಾಗೆ ಬಳಕೆ ಮಾಡಿಕೊಳ್ಳುತ್ತಿದ್ದಾನೆ. ಮನುಷ್ಯರು ಅಥವಾ ನಮ್ಮನ್ನು ಆಳುವವರು ಎಚ್ಚತ್ತುಕೊಂಡು ಜನರಿಗೆ ಅರಿವು ಮೂಡಿಸುವುದರ ಜೊತೆಗೆ ಪರಸರ ನಾಶವನ್ನು ತಡೆಗಟ್ಟಲು ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕಿದೆ.
ಪರಿಸರದಲ್ಲಿ ಲಕ್ಷ ಲಕ್ಷ ಜೀವಿಗಳಂತೆ ಮನುಷ್ಯನೂ ಒಂದು ಜೀವಿ ಎನ್ನುವುದನ್ನು ಮರೆಯಬಾರದು, ಈ ಎಲ್ಲಾ ಲಕ್ಷೋಪಲಕ್ಷ ಜೀವಿಗಳಂತೆ ಮಾನವ ಜೀವಿಯೂ ಪ್ರಕೃತಿಯ ನಿಯಮಗಳನ್ನು ಪಾಲಿಸಿದ್ದರೆ ಬಹುಷ್ಯ ಇಂದು ಯಾವುದೇ ಸಮಸ್ಯೆಗಳು ಬರುತ್ತಿರಲಿಲ್ಲ. ಆದರೆ ಬುದ್ಧಿ ಜೀವಿಯಾದ ಮನುಷ್ಯ ಜೀವಿಯು ಪರಿಸರವನ್ನು ತನಗೆ ಸೂಕ್ತವಾದ ರೀತಿಯಲ್ಲಿ ಪರವರ್ತನೆ ಮಾಡಿ, ಈ ಸುಂದರ ವ್ಯವಸ್ಥೆಯನ್ನು ಹಾಳುಮಾಡುತ್ತಿರುವುದು ನೋಡಿದರೆ ಮನುಷ್ಯನ ತನ್ನ ಅಂತ್ಯವನ್ನು ತಾನೆ ಕಂಡುಕೊಳುತ್ತಿರುವುದಂತು ಸತ್ಯ. ಹಾಗಾಗಿ ಇಂತಹ ಚಳುವಳಿಗಳನ್ನು ನಡೆಸುವ ಮೂಲಕ ಸರ್ಕಾರ ಮತ್ತು ಅರಣ್ಯವನ್ನು ಮನಸ್ಸಿಗೆ ಬಂದಂತೆ ನಾಶ ಮಾಡುತ್ತಿರುವವರ ಕಣ್ಣು ತೆರೆಸಲು ಸಹಕಾರಿಯಾಗಿದ್ದು ಪರಿಸರದ ಮೇಲೆ ನಡೆಯುತ್ತಿರುವಂತಹ ದೌರ್ಜನ್ಯವನ್ನು ತಡೆಗಟ್ಟುವ ಮೂಲಕ ಜನರಲ್ಲಿ ಪರಿಸರ ಪ್ರೇಮವನ್ನು ಮೂಡಿಸಿ ಪರಿಸರವನ್ನು ರಕ್ಷಿಸುವಂತಹ ಕಾರ್ಯವನ್ನು ಮಾಡಬೇಕಿದೆ.
ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವ ಬರದಲ್ಲಿ ಪರಿಸರಕ್ಕೆ ಮಾರಕವಾಗುವಂತಹ ಯೋಜನೆಗಳು, ಕಟ್ಟಡಗಳು ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಇನ್ನು ವಿಜ್ಞಾನ ಮತ್ತು ತಂತ್ರಜ್ಞಾನಗಳ ಅವಿಷ್ಕಾರಗಳಿಂದಾಗಿ ಯಂತ್ರಗಳ ಬಳಕೆ ಹೆಚ್ಚುತ್ತಿದ್ದು ವಾತಾವರಣ ಕಲುಶಿತವಾಗುತ್ತಿದೆ. ಇದಕ್ಕೆ ಸ್ಪಷ್ಟ ಉದಾಹಾರಣೆಯಾಗಿ ದೆಹಲಿ ನಮ್ಮ ಕಣ್ಣಮುಂದಿದೆ. ಹೀಗೆ ಪರಿಸರದಲ್ಲಿ ಅಸಮತೋಲನದಿಂದ ಶುದ್ಧ ನೀರು ಮತ್ತು ಗಾಳಿಯ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆರೆಕಟ್ಟೆಗಳು ಬತ್ತಿ ಹೊಗುತ್ತಿದ್ದು ಒಂದು ಹನಿ ನೀರಿಗಾಗಿ ಇಂದು ಪರದಾಡುವಂತಾಗಿದೆ ಎಂದರೆ ಅದಕ್ಕೆ ಹೊಣೆಯಾರು? ನಾವೆ ಅಲ್ಲವೇ! ಈ ಬಗ್ಗೆ ನಾವು ಚಿಂತಿಸಿ ಸೂಕ್ತ ಕ್ರಮವನ್ನು ಕೈಗೊಂಡಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯ.
copied from Kannada.readoo.in
nanu bardiddu alla ok
Explanation:
ನಾವು ವಾಸಿಸುತ್ತಿರುವ ಸುತ್ತ ಮುತ್ತಲಿನ ವಾತಾವರಣವೇ ನಮ್ಮ ಪರಿಸರ. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮ ಹೊಣೆ. ಆದರೆ ಅದು ನಮ್ಮಿಂದ ಸಾಧ್ಯವಾಗದೆಹೋಗುತ್ತಿರುವುದು ಒಂದು ಶೋಚನೀಯ ಸಂಗತಿ. ಇಂದಿನ ದಿನಗಳಲ್ಲಿ ನಾವು ಎದುರಿಸುತ್ತಿರುವ ಮೂರು ಮುಖ್ಯವಾದ ಪರಿಸರ ಮಾಲಿನ್ಯಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ.
ಇವೆಲ್ಲವುಗಳಿಗೂ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ. ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನನಿತ್ಯ ಜೀವನಪದ್ಧತಿಯಿಂದ ಹಾಗೂ ಹೆಚ್ಚು ತ್ತಿರುವ ಕಾರ್ಖಾನೆಗಳಿಂದ ಹೊರಬಿಡುವ ಕಸ ಹಾಗೂ ತ್ಯಾಜ್ಯ ನೀರು ಇವುಗಳಿಂದ ವಾತಾವರಣವು ಮಾಲಿನ್ಯಗೊಳ್ಳುತ್ತದೆ. ವಾಹನಗಳಿಂದ, ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲವು ನಮ್ಮ ನಿತ್ಯ ಜೀವನದ ಮೇಲೆಯೇ ಪ್ರಭಾವ ಬೀರುತ್ತದೆ. ಮಾಲಿನ್ಯ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸುವುದೇ ಅಸಾಧ್ಯವಾಗುತ್ತದೆ. ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ. ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯಬೇಕಾದರೆ ಇಂದಿನಿಂದಲೇ ಒಳ‍್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಜೂನ್ ತಿಂಗಳಿಗೆ ಒಂದು ವಿಶೇಷತೆ ಇದೆ. ಇದು ವಿಶ್ವ ಪರಿಸರ ದಿನಾಚರಣೆಯ ತಿಂಗಳು. ಇದು ನಾವು ನಮ್ಮ ಪರಿಸರದ ಬಗ್ಗೆ ತಿಳಿಯುವ, ಮಹತ್ವವನ್ನು ಅರಿಯುವ ಹಾಗೂ ಈ ದಿನಗಳಲ್ಲಿ ನಮ್ಮ ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು, ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾದದ್ದನ್ನು ನೆನಪಿಸುವ ಮಹತ್ತರವಾದ ದಿನ. ನಾವು ಈ ಪರಿಸರದ ಶಿಶುಗಳು, ಪರಿಸರವಿಲ್ಲದೆ ನಮ್ಮ ಅಸ್ತಿತ್ವಕ್ಕೆ ಯಾವುದೇ ರೀತಿಯ ಬೆಲೆಯಿರುವುದಿಲ್ಲ. ಪುರಾಣ ಕಾಲದಿಂದಲೂ ರಾಜಕುವರರೂ ಋಷಿಗಳ ಆಶ್ರಮದಲ್ಲಿಯೇ ಇದ್ದುಕೊಂಡೇ ಈ ಸಹಜ ಪ್ರಕೃತಿಯ ಮಡಿಲಲ್ಲಿಯೇ ವಿದ್ಯೆ ಕಲಿತರು… ಪರಿಸರವನ್ನು ಕಾಪಾಡಿಕೊಳ್ಳುವುದರ ಮಹತ್ವವನ್ನು ಅರಿತರು. ಇಂದೂ ಕೂಡ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಅರಿಯಬೇಕಾದ ಅವಶ್ಯಕತೆ, ಅನಿವಾರ್ಯತೆ ಎರಡೂ ಇದೆ.
ಮಾನವನು ಸಮಾಜಜೀವಿ ಎನ್ನುವಷ್ಟೇ ಸಹಜವಾದದ್ದು ಆತನು ಪರಿಸರದ ಶಿಶು ಎನ್ನುವುದು. ಅವನ ಸುತ್ತಮುತ್ತಲು ವೈವಿದ್ಯಮಯವಾದ ನಿಸರ್ಗದ ಸೊಬಗಿದೆ, ಹಲವಾರು ಮರಗಿಡಗಳಿವೆ. ವಿವಿಧ ಪ್ರಕಾರದ ಪ್ರಾಣಿಪಕ್ಷಿಗಳಿವೆ. ವೈವಿಧ್ಯಮಯವಾದ ಕೀಟ ಪ್ರಪಂಚವಿದೆ. ಅನೇಕ ಸೂಕ್ಷ್ಮ ಜೀವಿಗಳಿವೆ. ಅಷ್ಟೇ ಅಲ್ಲ. ಹಲವಾರು ಚಿಕ್ಕ ದೊಡ್ಡ ನದಿ, ಸಾಗರ ಸರೋವರಗಳಿವೆ. ಸಣ್ಣಪುಟ್ಟ ಗುಡ್ಡ ಬೆಟ್ಟಗಳಿವೆ, ದೊಡ್ಡ ದೊಡ್ಡ ಪರ್ವತ ಶಿಖರಗಳಿವೆ. ಗಾಳಿ, ಬೆಳಕು ಹಾಗು ಅಪರಿಮಿತ ಖನಿಜ ಸಂಪತ್ತಿದೆ.
ನಾವು ನಮ್ಮ ಈ ಜಗತ್ತಿನಲ್ಲಿ ಆಧುನಿಕತೆ, ನಗರೀಕರಣ, ಕೈಗಾರೀಕರಣ , ವಿಜ್ಞಾನ, ತಂತ್ರಜ್ಞಾನದ ಅಭಿವೃದ್ಧಿ ಎಂಬ ಹತ್ತು ಹಲವು ಕಾರಣಗಳಿಗೆ ಶರಣಾಗಿ ಅನೇಕ ರೀತಿಯಲ್ಲಿ ಇಂದು ಪರಿಸರಕ್ಕೆ ಅರಿತೋ ಅರಿಯದೆಯೋ ತೀವ್ರ ಹಾನಿಯನ್ನುಂಟು ಮಾಡುತ್ತಿದ್ದೇವೆ. ನಮ್ಮ ಪರಿಸರವನ್ನು ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದೂ ಆಗಿದ್ದರೂ ನಾವು ಅದನ್ನು ನಗಣ್ಯ ಎಂಬಂತೆ ವರ್ತಿಸುತ್ತಿದ್ದೇವೆ. ಈ ಕರ್ತವ್ಯವನ್ನು ನಮಗೆಲ್ಲರಿಗೂ ನೆನಪಿಸುವ ಉದ್ದೇಶದಿಂದಲೇ 1972 ನೇ ಇಸವಿಯಿಂದ ಪ್ರತಿ ವರ್ಷ ಜೂನ್ 5 ರಂದು ಪರಿಸರ ದಿನಾಚರಣೆಯನ್ನು ಆಚರಿಸುತ್ತಬಂದಿದ್ದೇವೆ.
ಇತ್ತೀಚೆಗಂತೂ ವಿಸ್ತರಣೆ ಹೊಂದುತ್ತಿರುವ ರೈಲು ಮಾರ್ಗ, ವಾಹನಗಳಿಗಾಗಿ ರಚನೆಯಾಗುತ್ತಿರುವ ಚತುಷ್ಪಥ ರಸ್ತೆಗಳು, ದೊಡ್ಡ ದೊಡ್ಡ ಕಟ್ಟಡಗಳಿಗಾಗಿ ನಿರಂತರವಾಗಿ ಕಡಿದೆಸೆಯುತ್ತಿರುವ ವೃಕ್ಷ ಸಂಪತ್ತಿನಿಂದಾಗಿ ನದಿಗಳಿಗೆ ಅಡ್ಡಲಾಗಿ ಕಟ್ಟುತ್ತಿರುವ ಜಲಾಶಯಗಳು ಇತ್ಯಾದಿಗಳಿಂದಾಗಿ ಈ ಮಾಲಿನ್ಯ ಹೆಚ್ಚುತ್ತಿದ್ದು, ಹವಾಮಾನ ವೈಪರೀತ್ಯಗಳೂ ಉಂಟಾಗುತ್ತಿವೆ. ಅಲ್ಲದೆ, ಹೆಚ್ಚುತ್ತಿರುವ ಜನಸಂಖ್ಯೆ, ವಸತಿ ಸಮುಚ್ಚಯಗಳು, ಹೊಗೆಉಗುಳುವ ವಾಹನಗಳ ಸಂದಣಿ, ಪ್ಲಾಸ್ಟಿಕ್ ಸಾಮ್ರಾಜ್ಯ ಇತ್ಯಾದಿಗಳಿಂದಾಗಿ ನಮ್ಮ ಪರಿಸರವು ಹಾಳಾಗುತ್ತಿದೆ.
ನಾವು ನಮ್ಮ ಸ್ವಾರ್ಥಕ್ಕಾಗಿ ಮರಗಿಡಗಳನ್ನು ಕಡಿದುಹಾಕುತ್ತೇವೆ. ಇದರಿಂದಾಗಿ ಹಸಿರು ವಿರಳವಾಗುತ್ತಹೋಗುತ್ತಿದೆ. ಈಗಲೆ ಎಚ್ಚೆತ್ತುಕೊಳ್ಳದೆಹೋದರೆ ಈಗಾಗಲೇ ಸುನಾಮಿ, ಬರ, ಮಹಾಪೂರದಂಥ ಪ್ರಕೃತಿ ವಿಕೋಪಗಳಿಗೆ ತುತ್ತಾಗುತ್ತಿರುವುದರ ಜೊತೆಗೆ ಇನ್ನೂ ಅತ್ಯಂತ ದಾರುಣವಾದ ಆಮ್ಲಜನಕದ ಕೊರತೆಯನ್ನು ಕೂಡ ಅನುಭವಿಸಬೇಕಾದ ಪರಿಸ್ಥಿತಿ ಬರುತ್ತದೆ.
ಹಾಗಾದರೆ ಈ ನಮ್ಮ ಪರಿಸರವನ್ನು, ನಮ್ಮ ವನ್ಯಜೀವಿಗಳನ್ನು, ನಮ್ಮ ನೀರಿನ ಮೂಲಗಳನ್ನು ಸಂರಕ್ಷಣೆ ಮಾಡುವ ಬಗೆಯೆಂತು?ಪರಿಸರ ಎಂಬ ಈ ಜೀವಜಾಲದಲ್ಲಿ ಜೀವಿಗಳು ಒಂದನ್ನೊಂದು ಪ್ರತ್ಯಕ್ಷ ಅಥವ ಪರೋಕ್ಷವಾಗಿ ಅವಲಂಬಿಸಿ ಪರಸ್ಪರ ಪ್ರಭಾವ ಬೀರುತ್ತವೆ . ಈ ರೀತಿಯ ಪರಸ್ಪರ ಅವಲಂಬನೆಯು ಸಕಲ ಜೀವಿಗಳನ್ನೂ ಆಹಾರ ಸರಪಳಿಯ ರೂಪದಲ್ಲಿ ಬೆಸೆದು, ಅವುಗಳ ಪರಸ್ಪರ ಪ್ರಭಾವಗಳನ್ನು ಇನ್ನೂ ನಿಕಟಗೊಳಿಸಿ ಈ ಜೀವಜಾಲವನ್ನಾಗಿಸಿದೆ. ಅಂಥ ಈ ಜೀವಜಾಲದ ಸರಪಣಿಯನ್ನು ನಾವು ನಿರಂತರವಾಗಿ ಉಳಿಸಬೇಕಾಗಿದೆ. ಗಿಡಮರಗಳನ್ನು ಕಡಿಯುವಾಗ ಒಂದಕ್ಕೆರಡು ಮರಗಳನ್ನು ನೆಡಬೇಕು. ಈ ಜೈವಿಕ ವೈವಿಧ್ಯತೆಯನ್ನು ಕಾಪಾಡುವುದು ನಮ್ಮ ಆದ್ಯ ಕರ್ತವ್ಯ. ವಿಷಪೂರಿತ ವಸ್ತುಗಳ ಮತ್ತು ತ್ಯಾಜ್ಯಗಳಾದ ಪ್ಲಾಸ್ಟಿಕ್ ಇತ್ಯಾದಿಗಳ ಅನಧಿಕೃತ ಮಾರಾಟವನ್ನು ತಡೆಗಟ್ಟಬೇಕು. ಪರಿಸರಕ್ಕೆ ಹಾನಿಯಾಗದ ಅಗ್ಗದ ಇಂಧನಮೂಲಗಳ ಅನ್ವೇಷಣೆ ಮುಂದುವರಿಯಬೇಕು. ಅಷ್ಟೇ ಅಲ್ಲ, ಬಡವ ಬಲ್ಲಿದರಾದಿಯಾಗಿ ಎಲ್ಲರೂ ಈ ಇಂಧನವನ್ನು ಉಪಯೋಗಿಸುವಂತಾಗಬೇಕು. ಭೂ ಸಂಪನ್ಮೂಲಗಳಾದ ಅರಣ್ಯ , ಮಣ್ಣುಗಳ, ನದಿಯಲ್ಲಿಯ ಉಸುಕು, ಕಲ್ಲುಬೆಟ್ಟಗಳನ್ನು ಸಂರಕ್ಷಿಸುವುದು, ಜೈವಿಕ ತಂತ್ರಜ್ನಾನವನ್ನು, ಅಪಾಯಕಾರಕ ತ್ಯಾಜ್ಯಗಳನ್ನು ಪರಿಸರ ತತ್ವಗಳ ಚೌಕಟ್ಟಿಗೆ ಹೊಂದಿಸಿ ಬಳಸುವುದರ ಮಹತ್ವವನ್ನು ಸಾಮಾನ್ಯ ನಾಗರಿಕರೂ ಅರಿಯಬೇಕು. ಇದಕ್ಕಾಗಿ ನಾವು ನಮ್ಮ ನಾಳಿನ ನಾಗರಿಕರಾದ ಮಕ್ಕಳಿಗೆ ಕೂಡ ಶಾಲೆಗಳಲ್ಲಿ ಈ ಬಗ್ಗೆ ಕಡ್ಡಾಯವಾಗಿ ಪರಿಸರ ಶಿಕ್ಷಣ ಕೊಡಬೇಕು. ಮಕ್ಕಳಲ್ಲಿ ಪರಿಸರ ಪ್ರೇಮ ಮತ್ತು ಪರಿಸರ ನಾಶದಿಂದಾಗುವ ದುಷ್ಟರಿಣಾಮಗಳ ಕುರಿತು ತಿಳಿಸುವ ಕೆಲಸ ಮಾಡಿದರೆ, ಮುಂದಿನ ದಿನಗಳಲ್ಲಿ ಇದರ ಉತ್ತಮ ಫಲಿತಾಂಶ ಸಿಗುತ್ತದೆ. ಪಠ್ಯ ಪುಸ್ತಕದಲ್ಲೂ ಪರಿಸರ ಸಂರಕ್ಷಣೆಯ ಶಿಕ್ಷಣಕ್ಕೆ ಒತ್ತು ನೀಡಬೇಕು. ಪರಿಸರ ಶಿಕ್ಷಣ ನಮ್ಮ ಸುತ್ತಮುತ್ತಲಿನ ಪರಿಸರ ಸಮಸ್ಯೆಗಳನ್ನು ಗುರುತಿಸಿ ಆ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಸಾಮರ್ಥ್ಯವನ್ನು ಬಲಪಡಿಸುವ ಒಂದು ಕಲಿಕೆಯ ಸಾಧನವಾಗಿದೆ. ಮಕ್ಕಳು ಇಂಥ ದಿನಾಚರಣೆಗಳಂದು ಘೋಷಣೆಗಳನ್ನು ಬರೆದು ಪ್ರಚಾರಮಾಡಬೇಕು. ಪರಿಸರ ರಕ್ಷಣೆಯ ಈ ಘೋಷಣೆಗಳು ಒಂದು ದಿನದ ಘೋಷಣೆಗಳಾಗಿಯೇ ಉಳಿಯದೆ, ಆಚರಣೆಗೂ ಬರುವಂತಾಗಬೇಕು. ಮನೆ ಆವರಣ ಮತ್ತು ಲಭ್ಯ ಸ್ಥಳಗಳಲ್ಲಿ ಸಸಿ ನೆಟ್ಟು ಬೆಳೆಸುವ ಮೂಲಕ ಎಲ್ಲರೂ ಪರಿಸರ ರಕ್ಷಣಾ ಕಾರ್ಯದಲ್ಲಿ ತೊಡಗಬೇಕು. ಈ ವಿಷಯದಲ್ಲಿ ಸಾಲುಮರದ ತಿಮ್ಮಕ್ಕ ನಮಗೆ ಮಾದರಿ. ಪ್ರತಿಯೊಬ್ಬ ನಾಗರಿಕರಲ್ಲೂ ಪರಿಸರದ ಬಗ್ಗೆ ಈ ಜಾಗೃತಿ ಮೂಡಬೇಕು. ಕೇವಲ ವರ್ಷಕ್ಕೆ ಒಂದು ದಿನ ಪರಿಸರ ರಕ್ಷಣೆಯೆಂಬುದು ಸೀಮಿತವಾಗಬಾರದು. ವರ್ಷದ ಪ್ರತಿ ದಿನವೂ ನಮಗೆ ಪರಿಸರ ದಿನವಾಗಬೇಕು.