India Languages, asked by nr4507373gmailcom, 1 year ago

some information about Girish Karnad in Kannada​

Answers

Answered by weirdgirl67
4

Answer:

ರೀಶ್ ಕಾರ್ನಾಡ್ ಕನ್ನಡ ಸಾಹಿತ್ಯ ಲೋಕ ಕಂಡ ಅದ್ಭುತ ನಾಟಕಕಾರ, ಸಾಹಿತಿ , ಚಿತ್ರ ನಟ ಮತ್ತು ನಿರ್ದೇಶಕ. ಕನ್ನಡ, ಹಿಂದಿ, ತೆಲಗು,ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ತಮ್ಮ ಅಭಿನಯದಿಂದ ವಿಶಿಷ್ಠ ಮುದ್ರೆ ಒತ್ತಿರುವ ಇವರು ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡದ ಏಳನೇ ಸಾಹಿತಿ. ಪ್ರಗತಿಶೀಲ ಸಮತಾವಾದ ಮತ್ತು ಜಾತ್ಯಾತೀತತೆಯನ್ನು ಪ್ರತಿಪಾದಿಸುವ ಇವರು ಕೆಲವು ಬಾರಿ ತಮ್ಮ ನೇರ ನುಡಿಗಳ ಮೂಲಕ ಹಲವು ವಿವಾದಗಳಲ್ಲಿ ಸಿಲುಕಿದ್ದುಂಟು.

ಗಿರೀಶ್ ಕಾರ್ನಾಡ್ ಅಭಿನಯಿಸಿದ ಚಲನಚಿತ್ರಗಳು

ಬಾಲ್ಯ

1938 ಮೇ 19 ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ಇವರ ತಂದೆ ರಘುನಾಥ ಕಾರ್ನಾಡ ಮುಂಬೈಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ತಾಯಿ ಕೃಷ್ಣಾಬಾಯಿ ಬಾಲ್ಯವಿವಾಹವಾಗಿ ಒಂದು ಮಗುವಾದ ನಂತರ ವಿಧವೆಯಾಗಿದ್ದರು. ರಘುನಾಥರ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೇ ಸಲ್ಲಿಸುವಾಗ ಪರಿಚಯವಾದ ಇವರನ್ನು ಆಗಿನ ಸಮಾಜಿಕ ಕಟ್ಟುಪಾಡುಗಳ ವಿರುದ್ಧವಾಗಿ ರಘುನಾಥರು ಕೈಹಿಡಿದರು. ನಂತರ ಈ ದಂಪತಿಗಳ ಮೂರನೇ ಮಗನಾಗಿ ಗಿರೀಶ್ ಜನಿಸಿದರು.

Similar questions