India Languages, asked by tharuncreddyalvas, 8 months ago

This is kannada launage for it you will get 50 points​

Attachments:

Answers

Answered by Aloneboi26
3

ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ[೧]. ಇದನ್ನು ಸ್ವರಗಳು, ಯೋಗವಾಹಗಳು, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ[೨]. ಅಕ್ಷರಮಾಲೆ ಎಂದರೆ ಒಂದು ಭಾಷೆಯನ್ನು ಬರೆಯುವಾಗ ಉಪಯೋಗಿಸುವ ಅಕ್ಷರಗಳ ಸರಣಿ. ಇದರ ಇತಿಹಾಸ ಪ್ರಾಚೀನ ಈಜಿಪ್ಟಿನಲ್ಲಿ ಕ್ರಿಸ್ತಪೂರ್ವ ೨೭೦೦ರಲ್ಲಿ ಆಯಿತು. ಭಾರತದಲ್ಲಿ ದೇವನಾಗರಿ ಲಿಪಿಯ ಅಕ್ಷರಮಾಲೆಯೇ ಅತ್ಯಂತ ಹಳೆಯದು. ಕೇಶಿರಾಜ ಕನ್ನಡದ ಅಕ್ಷರಗಳನ್ನು ಶುದ್ಧಗೆ ಎಂದು ಕರೆದನು. ಶುದ್ಧಗೆ ಎಂದರೆ ಶುದ್ಧಾಕ್ಷರ ಎಂದರ್ಥ.

Answered by ItzRiya07
4

Answer:

ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ.[೧೧] ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ. ೨೦೧೧ರ ಜನಗಣತಿಯ ಪ್ರಕಾರ ಜಗತ್ತಿನಲ್ಲಿ ೬.೪ ಕೋಟಿ ಜನರು ಕನ್ನಡ ಮಾತನಾಡುತ್ತಾರೆ ಎಂದು ತಿಳಿದುಬಂದಿದೆ. ಇವರಲ್ಲಿ ೫.೫ ಕೋಟಿ ಜನರ ಮಾತೃಭಾಷೆ ಕನ್ನಡವಾಗಿದೆ. ಬ್ರಾಹ್ಮಿ ಲಿಪಿಯಿಂದ ರೂಪುಗೊಂಡ ಕನ್ನಡ ಲಿಪಿಯನ್ನು ಉಪಯೋಗಿಸಿ ಕನ್ನಡ ಭಾಷೆಯನ್ನು ಬರೆಯಲಾಗುತ್ತದೆ. ಕನ್ನಡ ಬರಹದ ಮಾದರಿಗಳಿಗೆ ಸಾವಿರದ ಐನೂರು ವರುಷಗಳ ಚರಿತ್ರೆಯಿದೆ. ಕ್ರಿ.ಶ. ಆರನೆಯ ಶತಮಾನದ ಪಶ್ಚಿಮ ಗಂಗ ಸಾಮ್ರಾಜ್ಯದ ಕಾಲದಲ್ಲಿ [೧೨] ಮತ್ತು ಒಂಬತ್ತನೆಯ ಶತಮಾನದ ರಾಷ್ಟ್ರಕೂಟ ಸಾಮ್ರಾಜ್ಯದ ಕಾಲದಲ್ಲಿ ಹಳಗನ್ನಡ ಸಾಹಿತ್ಯ ಅತ್ಯಂತ ಹೆಚ್ಚಿನ ರಾಜಾಶ್ರಯ ಪಡೆಯಿತು.[೧೩][೧೪] ಅದಲ್ಲದೆ

Similar questions