India Languages, asked by helgasmaria6859, 1 year ago

Write a essay on male koylu

Answers

Answered by samantha379
156
ಮಳೆನೀರು ಕೊಯ್ಲು ಎಂಬುದು ಮಳೆನೀರನ್ನು ಒಟ್ಟುಗೂಡಿಸುವ, ಅಥವಾ ಸಂಚಯನ ಮಾಡುವ ಮತ್ತು ಶೇಖರಿಸಿಟ್ಟುಕೊಳ್ಳುವ ವಿಧಾನಕ್ಕಿರುವ ಹೆಸರು.[ ಕುಡಿಯುವ ನೀರನ್ನು ಒದಗಿಸಲು ಜಾನುವಾರುಗಳಿಗೆ ನೀರುಣಿಸಲು ನೀರಾವರಿಗಾಗಿ ನೀರಿನ ವ್ಯವಸ್ಥೆ ಮಾಡಲು ಅಥವಾ ಅಂತರ್ಜಲ ಪುನರ್ಭರ್ತಿಕಾರ್ಯ ಎಂದು ಕರೆಯಲಾಗುವ ಪ್ರಕ್ರಿಯೆಯೊಂದರಲ್ಲಿ ನೀರುಪೊಟರೆಯನ್ನು ಪುನಃ ತುಂಬಿಸಲು ಮಳೆನೀರು ಕೊಯ್ಲು ಪದ್ಧತಿಯನ್ನು ಬಳಸಿಕೊಂಡು ಬರಲಾಗಿದೆ. ಮನೆಗಳು, ಗುಡಾರಗಳು ಮತ್ತು ಸ್ಥಳೀಯ ಸಾರ್ವಜನಿಕ ಕಟ್ಟಡಗಳ ಛಾವಣಿಗಳಿಂದ ಅಥವಾ ವಿಶೇಷವಾಗಿ ಸಿದ್ಧಗೊಳಿಸಲಾದ ನೆಲದ ಪ್ರದೇಶಗಳಿಂದ ಸಂಗ್ರಹಿಸಲಾದ ಮಳೆನೀರು, ಕುಡಿಯುವ ನೀರಿಗೆ ತನ್ನದೇ ಆದ ಪ್ರಮುಖ ಕೊಡುಗೆಯನ್ನು ನೀಡಬಲ್ಲದು. ಕೆಲವೊಂದು ಸಂದರ್ಭಗಳಲ್ಲಿ, ಮಳೆನೀರು ಮಾತ್ರವೇ ಲಭ್ಯವಿರುವ ಏಕೈಕ, ಅಥವಾ ಮಿತವ್ಯಯದ ನೀರಿನ ಮೂಲವಾಗಿರಲು ಸಾಧ್ಯವಿದೆ. ಸ್ಥಳೀಯವಾಗಿ ದೊರೆಯುವ ಹೆಚ್ಚು ದುಬಾರಿಯಲ್ಲದ ಸಾಮಗ್ರಿಗಳಿಂದ ಮಳೆನೀರು ಕೊಯ್ಲಿನ ವ್ಯವಸ್ಥೆಗಳನ್ನು ಸರಳವಾಗಿ ನಿರ್ಮಿಸಬಹುದು, ಮತ್ತು ಬಹುತೇಕ ವಾಸಯೋಗ್ಯ ತಾಣಗಳಲ್ಲಿ ಇವು ಸಾಮರ್ಥ್ಯದಿಂದೊಡಗೂಡಿ ಯಶಸ್ವಿಯಾಗಿವೆ.

ಛಾವಣಿಯ ಮಳೆನೀರು ಸಾಮಾನ್ಯವಾಗಿ ಉತ್ತಮ ಗುಣಮಟ್ಟದ್ದಾಗಿರುತ್ತದೆಯಾದ್ದರಿಂದ, ಬಳಕೆಗೆ ಮೊದಲು ಅದನ್ನು ಸಂಸ್ಕರಿಸುವ ಅಗತ್ಯ ಕಂಡುಬರುವುದಿಲ್ಲ. ವಾರ್ಷಿಕವಾಗಿ 200ಮಿಮೀಗಿಂತಲೂ ಹೆಚ್ಚಿನ ಪ್ರಮಾಣದ ಒಂದು ಸರಾಸರಿ ಮಳೆಸುರಿತ ಕಂಡುಬರುವ, ಮತ್ತು ಸುಲಭಲಭ್ಯ ನೀರಿನ ಮೂಲಗಳು ಇರದ ಇನ್ನಾವುದೇ ಪ್ರದೇಶಗಳಲ್ಲಿ ಗೃಹಬಳಕೆಯ ಮಳೆಸುರಿತದ ಜಲಸಂಗ್ರಹಣಾ ವ್ಯವಸ್ಥೆಗಳು ಸೂಕ್ತವಾಗಿ ಕಂಡುಬರುತ್ತವೆ (ಸ್ಕಿನ್ನರ್ ಮತ್ತು ಕಾಟನ್‌, 1992). ಸರಳವಾದ ವಿಧಾನದಿಂದ ಮೊದಲ್ಗೊಂಡು ಸಂಕೀರ್ಣವಾದ ಕೈಗಾರಿಕಾ ವ್ಯವಸ್ಥೆಗಳವರೆಗೆ, ಮಳೆನೀರನ್ನು ಕೊಯ್ಲು ಮಾಡಲು ಹಲವಾರು ವಿಧದ ವ್ಯವಸ್ಥೆಗಳಿವೆ.

ಸಾಮಾನ್ಯವಾಗಿ, ಮಳೆನೀರನ್ನು ನೆಲದಿಂದ ಇಲ್ಲವೇ ಛಾವಣಿಯೊಂದರಿಂದ ಕೊಯ್ಲು ಮಾಡಲಾಗುತ್ತದೆ. ಈ ಎರಡೂ ವ್ಯವಸ್ಥೆಗಳಿಂದ ನೀರನ್ನು ಸಂಗ್ರಹಿಸಬಹುದಾದ ವೇಗವು ಸದರಿ ವ್ಯವಸ್ಥೆಯ ಯೋಜನಾ ಪ್ರದೇಶ, ಅದರ ಸಾಮರ್ಥ್ಯ, ಮತ್ತು ಮಳೆಸುರಿತದ ತೀವ್ರತೆಯನ್ನು ಅವಲಂಬಿಸಿರುತ್ತದೆ.

please mark my answer as brainliest it's very needed for me
Answered by mayankkaashyapgs
4

Answer:

ವಾತಾವರಣದಲ್ಲಿರುವ ನೀರಾವಿಯು ತಂಪು ಪಡೆದುಕೊಂಡು ಮತ್ತೆ ದ್ರವರೂಪಕ್ಕೆ ಬಂದು ಭೂಮಿಯ ಮೇಲೆ ಬೀಳುವ ಪ್ರಕ್ರಿಯೆಯೇ ಮಳೆ. ಮೋಡಗಳಲ್ಲಿನ ನೀರು ಬೇರೆ ಬೇರೆ ಹನಿಗಳಾಗಿ ಭೂಮಿಗೆ ಉದುರುತ್ತವೆ. ಎತ್ತರದ ಮೋಡಗಳಿಂದ ಬೀಳುವ ಹನಿಗಳೆಲ್ಲಾ ನೆಲವನ್ನು ತಲುಪಲಾರವು. ಮೋಡ ಮತ್ತು ನೆಲಗಳ ಮಧ್ಯೆ ಶುಷ್ಕ ವಾತಾವರಣವಿದ್ದಲ್ಲಿ ಗಣನೀಯ ಪ್ರಮಾಣದ ಸಣ್ಣ ಹನಿಗಳು ಮತ್ತೆ ಆವಿಯಾಗಿ ಹೋಗುತ್ತವೆ. ಹೀಗೆ ಒಂದು ಹನಿಯೂ ನೆಲ ಮುಟ್ಟದೆ ಹೋದರೆ ಅಂತ ಮಳೆಯನ್ನು 'ವಿರ್ಗಾ' ಎಂದು ಕರೆಯುವರು. ಇಂತಹ ವಿದ್ಯಮಾನವು ಸಾಮಾನ್ಯವಾಗಿ ಬಿಸಿ ಮತ್ತು ಶುಷ್ಕ ಮರುಭೂಮಿ[೧]ಯ ಪ್ರದೇಶಗಳಲ್ಲಿ ಘಟಿಸುತ್ತದೆ.

Similar questions