Business Studies, asked by sohail5711, 1 year ago

write a short note on Mahatma Gandhiji Kannada essay

Answers

Answered by rashida123
4
ಮೋಹನ್‌ದಾಸ್ ಕರಮ್‌ಚಂದ್ ಗಾಂಧಿ[೧] ಯವರು ೧೮೬೯ರ ಅಕ್ಟೋಬರ್ ೨ ರಂದು ಭಾರತದ ಇಂದಿನ ಗುಜರಾತ್‌ ರಾಜ್ಯದ ಕರಾವಳಿ ಪಟ್ಟಣ ಪೋರಬಂದರ್‌ನಲ್ಲಿ ಜನಿಸಿದರು.ಅವರ ತಂದೆ ಕರಮ್‌ಚಂದ್ ಗಾಂಧಿ(೧೮೨೨-೧೮೮೫)ಯವರು, ಹಿಂದೂ ಮೋಧ್‌ಸಮುದಾಯದವರಾಗಿದ್ದು, ಬ್ರಿಟಿಷ್‌ ಭಾರತದ ಕಾಠೀಯಾವಾಡ್ ನಿಯೋಗದಲ್ಲಿನ ಒಂದು ಸಣ್ಣ ರಾಜಾಡಳಿತದ ರಾಜ್ಯವಾದ ಪೋರ ಬಂದರ್ ರಾಜ್ಯದ ದಿವಾನ್‌ (ಪ್ರಧಾನ ಮಂತ್ರಿ) ಆಗಿದ್ದರು.[೨]ಅವರ ತಾಯಿ ಪುತಲೀಬಾಯಿಯವರು ಹಿಂದೂ ಪ್ರಣಾಮಿ ವೈಷ್ಣವ ಸಮುದಯದವರಾಗಿದ್ದು, ಕರಮ್‌ಚಂದ್‌ರ ನಾಲ್ಕನೆಯ ಪತ್ನಿಯಾಗಿದ್ದರು; ಮೊದಲ ಮೂರು ಪತ್ನಿಯರು ಮೇಲುನೋಟಕ್ಕೆ ವ್ಯಕ್ತವಾಗುವಂತೆ ಶಿಶುಜನನದ ಸಮಯದಲ್ಲಿ ಮೃತರಾಗಿದ್ದರು.[೩] ಧರ್ಮನಿಷ್ಠ ತಾಯಿಯೊಂದಿಗೆ ಮತ್ತು ಆ ಪ್ರಾಂತ್ಯದ ಜೈನ್‌ ಸಂಪ್ರದಾಯಗಳೊಂದಿಗೆ ಬೆಳೆದ ಬಾಲಕ ಮೋಹನ್‌ದಾಸ್‌ ತಮ್ಮ ಮುಂದಿನ ಪ್ರೌಢ ಜೀವನದಲ್ಲಿ ಪ್ರಮುಖ ಪಾತ್ರ ವಹಿಸಬಹುದಾದಂತಹ ಪ್ರಭಾವಗಳನ್ನು ಸಾಕಷ್ಟು ಮುಂಚಿತವಾಗಿಯೇ ಅರಗಿಸಿ ಕೊಂಡರು;ಚೇತನಾತ್ಮಕ ಜೀವಿಗಳಿಗಾಗಿ ಸಹಾನುಭೂತಿ, ಸಸ್ಯಾಹಾರ, ಸ್ವಶುದ್ಧೀಕರಣಕ್ಕಾಗಿ ಉಪವಾಸ ಮತ್ತು ವಿವಿಧ ಮತಗಳಿಗೆ ಸೇರಿರುವ ಜನರ ನಡುವೆ ಪರಸ್ಪರ ಸಹನೆ ಇವುಗಳಲ್ಲಿ ಸೇರಿದ್ದವು. ಭಾರತೀಯ ಮೇರುಕಥೆಗಳು, ಅದರಲ್ಲೂ ವಿಶೇಷವಾಗಿ, ಭಾರತೀಯ ಮಹಾಕೃತಿಗಳಲ್ಲಿನ ಶ್ರವಣ ಮತ್ತು ಹರಿಶ್ಚಂದ್ರ ಮಹಾರಾಜರ ಕಥೆಗಳು ಬಾಲ್ಯಾವಸ್ಥೆಯಲ್ಲಿದ್ದ ಗಾಂಧಿಯವರ ಮೇಲೆ ಭಾರೀ ಪ್ರಭಾವ ಬೀರಿದ್ದವು.

MARK AS A BRAINLIEST
Similar questions