Write an essay about Sankranti festival in Kannada
Answers
Sankranti is called 'Pongal' in Tamilnadu and 'Pedda' or 'Peddala' Panduga in some parts of Andhra Pradesh. 'Pedda' means big and 'Panduga' means a festival. It is a festival, when prayers and offerings are made to ancestors. It is celebrated in different ways in different parts of the country, as it is a harvest festival. It is a festival to thank God for giving a good harvest. By January the paddy, the pulses, the sugarcane and all other cereals would have been harvested. The farmers would be full of joy and happiness.
*Hope it helps you*
ಪ್ರಕಾರ ಒಂದು ವಿವರಣೆ
ಸೂರ್ಯೋದಯ ಪೂರ್ವದಲ್ಲಿ ಮತ್ತು ಸೂರ್ಯಾಸ್ತಮಾನ ಪಶ್ಚಿಮದಲ್ಲಿ ಎಂದು ಹೇಳುವುದಾದರೂ, ಯಾವುದೇ ಸ್ಥಳದಲ್ಲಿ ಕರಾರುವಾಕ್ಕಾಗಿ ಪೂರ್ವದಲ್ಲೇ ಸೂರ್ಯೋದಯವಾಗುವುದು ಮತ್ತು ಪಶ್ಚಿಮದಲ್ಲೇ ಸೂರ್ಯಾಸ್ತಮಾನವಾಗುವುದು ವರ್ಷದಲ್ಲಿ ಎರಡೇ ದಿನಗಳಂದು. ಆ ದಿನಗಳನ್ನು ಈಕ್ವಿನಾಕ್ಸ್ (equinox)ಎಂದು ಕರೆಯುತ್ತಾರೆ. ಅಂದು ಹಗಲಿರುಳುಗಳು ದಿನವನ್ನು ಸಮಪಾಲಾಗಿ, ಅಂದರೆ ೧೨ಗಂಟೆಗಳಾಗಿ ಹಂಚಿಕೊಳ್ಳುತ್ತವೆ. ವರ್ಷದ ಉಳಿದ ದಿನಗಳಲ್ಲಿ ಹಗಲಿರುಳುಗಳ ಪಾಲು ಸಮವಾಗಿರುವುದಿಲ್ಲ.
ಬೇಸಗೆಯಲ್ಲಿ ಹಗಲು ಹೆಚ್ಚು, ಇರುಳು ಕಮ್ಮಿ. ಚಳಿಗಾಲದಲ್ಲಿ ಹಗಲು ಕಮ್ಮಿ, ಇರುಳು ಹೆಚ್ಚು. ಈಕ್ವಿನಾಕ್ಸ್ ದಿವಸಗಳ ಹೊರತಾಗಿ ಸೂರ್ಯನ ಉದಯ ಪೂರ್ವದ ಬಲಕ್ಕೆ (ಅಂದರೆ ಉತ್ತರಕ್ಕೆ) ಅಥವಾ ಎಡಕ್ಕೆ (ಅಂದರೆ ದಕ್ಷಿಣಕ್ಕೆ) ಆಗುತ್ತದೆ. ಚಳಿಗಾಲ (ಅಂದರೆ ಇರುಳಿನ ಪ್ರಮಾಣ)ಹೆಚ್ಚಾದಂತೆ ಸೂರ್ಯನ ಉದಯ ಹೆಚ್ಚು ದಕ್ಷಿಣ ದಿಕ್ಕಿಗೆ ಚಲಿಸುವುದು ಗೋಚರಿಸುತ್ತದೆ. ಕೊನೆಗೆ ಒಂದು ದಿನ ದಕ್ಷಿಣದ ತುತ್ತ ತುದಿಯ ಹಂತವನ್ನು ತಲುಪಿ, ಅಚಲವೆಂಬಂತೆ ಕಂಡು, ಮರುದಿನದಿಂದ ಸೂರ್ಯನ ಉದಯ ಮರಳಿ ವಿರುಧ್ಧ ದಿಕ್ಕಿನಲ್ಲಿ ಆಗುತ್ತಾ ಚಲಿಸುತ್ತದೆ. *ಅಂದರೆ ಸೂರ್ಯ ಇನ್ನು ದಕ್ಷಿಣ ದಿಕ್ಕಿನತ್ತದ ತನ್ನ ಚಲನವನ್ನು ನಿಲ್ಲಿಸಿ ಉತ್ತರಕ್ಕೆ ಚಲಿಸಲು ಪ್ರಾರಂಭಿಸುತ್ತಾನೆ. ಈ ದಿನ ಉತ್ತರಾಯಣದ ದಿನ. ಇದು ಚಳಿಗಾಲ ಮುಗಿದು ಮುಂಬರುವ ಬೇಸಗೆಯ ಮುನ್ಸೂಚನೆ. winter solstice ಎಂದೂ ಕರೆಯಲ್ಪಡುತ್ತದೆ. ಸುಮಾರು ಡಿಸೆಂಬರ್ ೨೨ ಈ ದಿನ. ಈ ದಿನವನ್ನು ಮಕರ ಸಂಕ್ರಾಂತಿಯೆಂದು ಗುರುತಿಸಬೇಕಾಗಿದ್ದರೂ ಸಾಂಪ್ರದಾಯಿಕವಾಗಿ ಜನವರಿ ತಿಂಗಳ ನಡುವಿನಲ್ಲಿ ಮಕರ ಸಂಕ್ರಾಂತಿಯನ್ನು ಆಚರಿಸುತ್ತೇವೆ.
ಇಲ್ಲಿಂದ ಸೂರ್ಯೋದಯ ಇನ್ನು ಆರು ತಿಂಗಳು ಉತ್ತರದ ದಿಕ್ಕಿನಲ್ಲಿ ಚಲಿಸುತ್ತಾ ನಡುವೆ ಮತ್ತೆ ಈಕ್ವಿನಾಕ್ಸ್ ದಿನವನ್ನೂ ತಲುಪಿ, ಇನ್ನೂ ಅದೇ ದಿಕ್ಕಿನಲ್ಲಿ (ಉತ್ತರಕ್ಕೆ)ಚಲಿಸುತ್ತಾ ಹೋಗುತ್ತದೆ. ಉತ್ತರಕ್ಕೆ ಹೆಚ್ಚು ಹೋದಂತೆಲ್ಲಾ ಹಗಲಿನ ಪ್ರಮಾಣ ಹೆಚ್ಚಾಗಿ ಇರುಳು ಕಮ್ಮಿಯಾಗುತ್ತಾ ಹೋಗುತ್ತದೆ. ಸೂರ್ಯನ ತಾಪ ಹೆಚ್ಚಾಗುತ್ತಾ ಬೇಸಗೆಯನ್ನು ಅನುಭವಿಸುತ್ತೇವೆ. ಕೊನೆಗೆ ಒಂದು ದಿನ ಉತ್ತರದ ತುತ್ತ ತುದಿಯನ್ನು ತಲುಪಿ, ಅಚಲವೆಂಬಂತೆ ಕಂಡು, ಮರುದಿನದಿಂದ ಸೂರ್ಯನ ಉದಯ ಮರಳಿ ವಿರುದ್ಧ ದಿಕ್ಕಿನಲ್ಲಿ ಆಗುತ್ತಾ ಚಲಿಸುತ್ತದೆ.
ಅಂದರೆ ಸೂರ್ಯ ಇನ್ನು ಉತ್ತರ ದಿಕ್ಕಿನತ್ತದ ತನ್ನ ಚಲನೆಯನ್ನು ನಿಲ್ಲಿಸಿ ದಕ್ಷಿಣಕ್ಕೆ ಚಲಿಸಲು ಪ್ರಾರಂಭಿಸುತ್ತಾನೆ. ಇದು ದಕ್ಷಿಣಾಯನದ ದಿನ. ಬೇಸಗೆ ಮುಗಿದು ಮುಂಬರುವ ಚಳಿಗಾಲದ ಮುನ್ಸೂಚನೆ. ಈ ದಿನವನ್ನು ಕರ್ಕಾಟಕ ಸಂಕ್ರಾಂತಿ ಎಂದು ಗುರುತಿಸುತ್ತಾರೆ. summer solstice ಎಂದೂ ಕರೆಯಲ್ಪಡುತ್ತದೆ. ಸುಮಾರು ಜೂನ್ ೨೧ ಈ ದಿನ. ಇಷ್ಟೆಲ್ಲಾ ವಿವರಣೆ ಅನ್ವಯಿಸುವುದು ಭೂಮಂಡಲದ ಭೂಮಧ್ಯರೇಖೆಯ ಉತ್ತರಾರ್ಧಕ್ಕೆ. ಇದೇ ರೀತಿಯ ಆದರೆ ತದ್ವಿರುದ್ಧವಾದ ವಿವರಣೆ ದಕ್ಷಿಣಾರ್ಧಕ್ಕೆ ಅನ್ವಯಿಸುತ್ತದೆ.
ಹೀಗೆ ಕಾಣುವ ಸೂರ್ಯನ ಚಲನೆಗೆ ಭೂಮಿಯ ಅಕ್ಷರೇಖೆ (axis) ಸುಮಾರು 22 1/2 degree ವಾಲಿರುವುದು ಕಾರಣ. ಯಾವುದಾದರೂ ಒಂದು ನಿಗದಿತ ಜಾಗದಲ್ಲಿ ದಿನಾಲು ನಿಂತು, ದಿನದ ಒಂದೇ ನಿಗದಿತ ಸಮಯದಲ್ಲಿ, ಆಗಸದಲ್ಲಿ ಸೂರ್ಯನ ಸ್ಥಾನವನ್ನು ಗುರುತು ಹಾಕಿಕೊಂಡು, ಈ ರೀತಿ ವರ್ಷವಿಡೀ ಮಾಡಿದರೆ, ಗುರುತು ಹಾಕಿಕೊಂಡ ಆ ಬಿಂದುಗಳೆಲ್ಲಾ ಸುಮಾರು '8'ರ ಆಕೃತಿಯಲ್ಲಿ ಕಾಣುತ್ತವೆ.
ಈ ವಿನ್ಯಾಸವನ್ನು analemma ಎನ್ನುತ್ತಾರೆ. '8'ರ ಆಕೃತಿಯ ನೆತ್ತಿಯ ಬಿಂದು summer solstice ದಿನದಂದು ಆಗುತ್ತದೆ. ಆ ಆಕೃತಿಯ ಅಡಿಯ ಬಿಂದು winter solstice, ಅಂದರೆ ಮಕರ ಸಂಕ್ರಾಂತಿಯ ದಿನದಂದು ಆಗುತ್ತದೆ. ನಡುವೆ ರೇಖೆಗಳು ಪರಸ್ಪರ ಹಾದು ಹೋಗುವ ಬಿಂದು equinox ದಿನಗಳು. 8 ರ ಆಕೃತಿಯ ನೆತ್ತಿಯಿಂದ ಅದರ ಅಡಿಯ ಬಿಂದುವಿನ ತನಕದ ದಿನಗಳು ವರ್ಷದ ದಕ್ಷಿಣಾಯನದ ದಿನಗಳು. ಆ ಆಕೃತಿಯ ಅಡಿಯಿಂದ ಅದರ ನೆತ್ತಿಯ ಬಿಂದುವಿನ ತನಕದ ದಿನಗಳು ಉತ್ತರಾಯಣದ ದಿನಗಳು.