India Languages, asked by nethramuniraju18, 1 day ago

write essay about MY COUNTRY (india) in Kannada language
I will mark as Brainlist​

Answers

Answered by hemantkumark1973
1

Answer:

ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ. ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು, ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ, ಭೂತಾನ, ಪೂರ್ವದಲ್ಲಿ ಮ್ಯಾನ್ಮಾರ್, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ ಶ್ರೀಲಂಕಾ,ಮಾಲಡಿವ್ಸ್ನಂತಹ ದ್ವೀಪ ರಾಷ್ಟ್ರಗಳಿಗೆ ಹತ್ತಿರವಾಗಿದೆ. ಕೊಳ್ಳುವ ಶಕ್ತಿಯ ಮೇರೆಗೆ, ಪ್ರಪಂಚದ ನಾಲ್ಕನೇ ಅತಿ ದೊಡ್ಡ ಆರ್ಥಿಕ ವ್ಯವಸ್ಥೆಯನ್ನು ಹೊಂದಿದೆ

ಭಾರತ ದೇಶವು ಪ್ರಾಚೀನ ಸಿಂಧೂತಟದ ನಾಗರೀಕತೆಯ ತವರು ಮನೆಯಾಗಿದೆ. ಅನೇಕ ಐತಿಹಾಸಿಕ ವಾಣಿಜ್ಯ ಮಾರ್ಗಗಳು ಹಾಗೂ ಪ್ರಾಚೀನ ಸಾಮ್ರಾಜ್ಯಗಳು ಭಾರತ ದೇಶದಲ್ಲಿ ಉಗಮಿಸಿವೆ. ಪ್ರಪಂಚದ ನಾಲ್ಕು ಪ್ರಮುಖ ಧರ್ಮಗಳಾದ ಹಿಂದೂಧರ್ಮ, ಬೌದ್ಧ, ಜೈನ ಧರ್ಮ ಮತ್ತು ಸಿಖ್ ಧರ್ಮಗಳು ಭಾರತದಲ್ಲಿ ಆರಂಭವಾಗಿವೆ. ಝೋ ರಾಷ್ಟ್ರಿಯನಿಸಂ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಂ ಧರ್ಮ ಕ್ರಿ.ಶ ೭ನೇ ಸಹಸ್ರಮಾನದಲ್ಲಿ ಆಗಮಿಸಿ ಈ ಪ್ರದೇಶದ ಸಂಸ್ಕೃತಿಯನ್ನು ವೈವಿಧ್ಯಮಯವಾಗಿಸಿವೆ. ೧೬ನೇ ಶತಮಾನದಲ್ಲಿ ಭಾರತ ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪೆನಿಯಿಂದ ಆಕ್ರಮಣಗೊಂಡು ಇಂಗ್ಲೇಂಡಿನ ಆಡಳಿತಕ್ಕೊಳಪಟ್ಟಿತು. ೧೯ನೇ ಶತಮಾನದ ಮಧ್ಯದಲ್ಲಿ ಭಾರತ ಅನೇಕ ಸ್ವಾತಂತ್ರ್ಯ ಹೋರಾಟದ ಫಲವಾಗಿ ಬ್ರಿಟೀಷರಿಂದ ಸ್ವತಂತ್ರವಾಯಿತು.

Similar questions